ಶಾಸಕಾಂಗ ಸಭೆಯಲ್ಲಿ 'ಕೈ' ಮುಖಂಡರ ರಣತಂತ್ರ: ಉಪಚುನಾವಣೆ ಗೆಲ್ಲುವುದು ಅನಿವಾರ್ಯ; ನಾಯಕರಿಗೆ ಸುರ್ಜೇವಾಲಾ ಟಾರ್ಗೆಟ್!

Karnataka:

Font size:

ನಾವು ಹಿಂದಿನ ಮೂರು ಉಪಚುನಾವಣೆಗಳನ್ನು ಗೆದ್ದಿದ್ದೇವೆ ಮತ್ತು ಈ ಎರಡೂ ಉಪಚುನಾವಣೆಗಳನ್ನು ಗೆಲ್ಲಲೇಬೇಕು ಎಂದು ಸುರ್ಜೇವಾಲಾ ಸೂಚಿಸಿದ್ದಾರೆ

ಬೆಂಗಳೂರು: ಈ ಹಿಂದೆ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಸಾಮಾನ್ಯವಾಗಿ ವಿಧಾನಸಭೆ ಮತ್ತು ವಿಧಾನ ಪರಿಷತ್ ಅಧಿವೇಶನದಲ್ಲಿ ವಿರೋಧ ಪಕ್ಷಗಳನ್ನು ಹೇಗೆ ನಿಯಂತ್ರಿಸಬೇಕು ಎಂಬ ಬಗ್ಗೆ ಚರ್ಚೆ ನಡೆಸಲಾಗುತ್ತಿತ್ತು, ಆದರೆ ಬುಧವಾರ ನಡೆದ ಶಾಸಕಾಂಗ ಸಭೆ ವಿಭಿನ್ನವಾಗಿತ್ತು.

ಕ್ಯಾಪಿಟಲ್ ಹೋಟೆಲ್‌ನಲ್ಲಿ ನಡೆದ ಸಭೆಯಲ್ಲಿ ಉಪ ಚುನಾವಣೆ ಬಗ್ಗೆ ಚರ್ಚಿಸಲಾಯಿತು, ಕಾಂಗ್ರೆಸ್ ನಾಯಕರ ಚರ್ಚೆ ಹೋಟೆಲ್ ಕೊಠಡಿಯನ್ನು ವಾರ್ ರೂಂ ಆಗಿ ಬದಲಾಯಿಸಿತ್ತು.

ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಸಭೆಯನ್ನು ಉಪ ಚುನಾವಣೆಯಲ್ಲಿ ಹೇಗೆ ಸಮರೋಪಾದಿಯಲ್ಲಿ ಕೆಲಸ ಮಾಡಬೇಕು ಎಂದು ಹೇಳುವ ಮೂಲಕ ಪ್ರಾರಂಭಿಸಿದರು. ಎನ್‌ಡಿಎ (ಬಿಜೆಪಿ-ಜೆಡಿಎಸ್) ವಿರುದ್ಧ "ಒಗ್ಗಟ್ಟಾಗಿ" ಹೋರಾಡಬೇಕು ಇಲ್ಲದಿದ್ದರೇ ಕ್ಷೇತ್ರಗಳನ್ನು ಕಳೆದುಕೊಳ್ಳುವ ಅಪಾಯವಿದೆ ಎಂದು ಎಚ್ಚರಿಕೆ ನೀಡಿದರು.

ನಾವು ಹಿಂದಿನ ಮೂರು ಉಪಚುನಾವಣೆಗಳನ್ನು ಗೆದ್ದಿದ್ದೇವೆ ಮತ್ತು ಈ ಎರಡೂ ಉಪಚುನಾವಣೆಗಳನ್ನು ಗೆಲ್ಲಲೇಬೇಕು ಎಂದು ಸುರ್ಜೇವಾಲಾ ಸೂಚಿಸಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಎಲ್ಲವನ್ನೂ ಬಿಟ್ಟು ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣಕ್ಕೆ ಹೋಗಲು ಯಾರು ಸಿದ್ಧರಿದ್ದಾರೆ ಎಂದು ಸುರ್ಜೇವಾಲಾ ಶಾಸಕರ ಬಳಿ ಕೇಳಿದಾಗ ಬಹುತೇಕ ಎಲ್ಲರೂ ಕೈ ಎತ್ತಿದರು. ಸರಿ ಹಾಗಾದರೆ ನೀವೆಲ್ಲರೂ ಸ್ವಯಂ ಪ್ರೇರಣೆಯಿಂದ ಕೆಲಸ ಮಾಡಿ ಎಂದು ಕರೆ ನೀಡಿದ್ದಾರೆ.

Comments

Leave a Comment

Prev Post ಆಮಿರ್ ಖಾನ್, ಅಜಯ್ ದೇವಗನ್, ಅಕ್ಷಯ್ ಕುಮಾರ್ ಸಿನಿಮಾಗಳ ಹಿಂದಿಕ್ಕಿದ ‘ಕಾಂತಾರ 1’
Next Post IPL ಇತಿಹಾಸದಲ್ಲೇ ಅತಿದೊಡ್ಡ ಮಾರಾಟ: 16,000 ಕೋಟಿ ರೂ ಗೆ RCB ಸೇಲ್; ಹೊಸ ಮಾಲೀಕರು ಯಾರು ಗೊತ್ತಾ?